ಉತ್ತರ ಕರ್ನಾಟಕದಲ್ಲಿ ಕ್ಯಾನ್ಸರ ರೋಗಿಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಚಿಕಿತ್ಸೆಗಾಗಿ ಅಲೆದಾಡುತ್ತ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ಸಾವಿನಂಚಿಗೆ ತೆರಳುತ್ತಿದ್ದಾರೆ. ಆದ್ದರಿಂದ ಕ್ಯಾನ್ಸರ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಮುಂಬರುವ 2021ರ ಫೆಬ್ರುವರಿಯಲ್ಲಿ ಕರ್ನಾಟಕದಲ್ಲಿಯೇ ಪ್ರಥಮವಾಗಿ ಸುಸಜ್ಜಿತ ಹಾಗೂ ಅತ್ಯಾಧುನಿಕ ವೈದ್ಯಕೀಯ ಸಲಕರಣೆಯುಳ್ಳ ಕ್ಯಾನ್ಸರ ಆಸ್ಪತ್ರೆಯನ್ನು ಜನಸೇವೆಗೆ ಅರ್ಪಿಸಲಾಗುವದು ಎಂದು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರಿಂದಿಲ್ಲಿ ಹೇಳಿದರು.
ಕೆಎಲ್‍ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಹಿಂಬದಿಯಲ್ಲಿ ನಿರ್ಮಿಸಲಾಗುತ್ತಿರುವ ಆಸ್ಪತ್ರೆಯ ಕಟ್ಟಡದ ಕಾಮಗಾರಿ ಪ್ರಗತಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿ ಮಾತನಾಡಿದರು, 200 ಕೋ ರೂ.ಗಳ ವೆಚ್ಚದಲ್ಲಿ 200 ಹಾಸಿಗೆಗಳ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದ್ದು,ಕಟ್ಟಡದ ಕಾಮಗಾರಿ ಇದೇ ಡಿಸೆಂಬರ ವೇಳೆಗೆ ಪೂರ್ಣಗೊಳ್ಳಲಿದ್ದು, ಮುಂದಿನ ಫೆಬ್ರುವರಿ ವೇಳೆ ಸಂಪುರ್ಣ ಕಾಮಗಾರಿ ಮುಗಿಸಿ, ವೈದ್ಯಕೀಯ ಸಲಕರಣೆಗಳನ್ನು ಜೋಡಿಸಿ ಜನಸೇವೆಗೆ ಅರ್ಪಿಸಲಾಗುವದು ಎಂದು ತಿಳಿಸಿದರು.