ರಾಜ್ಯ ಬಜೆಟ: ಬೆಳಗಾವಿಗೆ ಕಿದ್ವಾಯಿ, ಹುಬ್ಬಳ್ಳಿಗೆ ಜಯದೇವ ಆಸ್ಪತ್ರೆ ಗ್ರಾಮೀಣರಿಗೆ ಯಶಸ್ವಿನಿ ಮರುಪ್ರಾರಂಭ

ರಾಜ್ಯ ಬಜೆಟ: ಬೆಳಗಾವಿಗೆ ಕಿದ್ವಾಯಿ, ಹುಬ್ಬಳ್ಳಿಗೆ ಜಯದೇವ ಆಸ್ಪತ್ರೆ
ಗ್ರಾಮೀಣರಿಗೆ ಯಶಸ್ವಿನಿ ಮರುಪ್ರಾರಂಭ

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ ಮಂಡಿಸಿದ್ದು, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಹಮನ ಹರಿಸಿದ್ದಾರೆ. ಸ್ಥಗಿತಗೊಳಿಸಿದ್ದ ರೈತರ ಯಶಸ್ವಿನಿ ಯೋಜನೆಯನ್ನು ಪರಿಷ್ಕೃತ ರೂಪದಲ್ಲಿ ಮರುಪ್ರಾಂಭಿಸಲು ಸುಮಾರು 300 ಕೋ. ರೂ.ಗಳ ಅನುದಾನವನ್ನು ಘೋಷಿಸಿದ್ದು, ಬೆಳಗಾವಿಗೆ ಕಿದ್ವಾಯಿ ಕ್ಯಾನ್ಸರ ಆಸ್ಪತ್ರೆಯನ್ನು ನೀಡಲಾಗಿದೆ.

ಬೆಳಗಾವಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಸ್ಥಾಪನೆ. ಆಯ್ದ 10 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ನೀಡುವ ಗಳನ್ನು ಸ್ಥಾಪಿಸಲಾಗುವುದು. ಏಳು ತಾಲ್ಲೂಕು ಆಸ್ಪತ್ರೆಗಳು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಕ್ರಮ. ಹುಬ್ಬಳ್ಳಿಯಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಹೃದ್ರೋಗ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ ಎಂದು ಬಜೆಟ್ ಅಧಿವೇಶನದಲ್ಲಿ ಘೋಷಿಸಿದ್ದಾರೆ

ಬೆಂಗಳೂರಿನ ಎಲ್ಲ ವಾಡ್‌ರ್ಗಳಲ್ಲಿ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಟ್ಟು 438 “ನಮ್ಮ ಕ್ಲಿನಿಕ್”ಗಳ ಸ್ಥಾಪನೆ. ರಾಜ್ಯದಲ್ಲಿ ಮಹಿಳಾ ಆರೋಗ್ಯ ಸಮಸ್ಯೆಗಳಿಗೆ ಸಲಹೆ ನೀಡಲು 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ. ಬಡ ಹಿರಿಯ ನಾಗರಿಕರಿಗೆ ಯೋಜನೆಯಡಿ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ ಸೌಲಭ್ಯ ಒದಗಿಸಲಾಗುತ್ತದೆ.

ತುಮಕೂರಿನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಟ್ರಾಮಾ ಕೇರ್ ಕೇಂದ್ರ ಸ್ಥಾಪನೆ; 2022-23ರಲ್ಲಿ 10 ಕೋಟಿ ರೂ. ಅನುದಾನ ತಾಲ್ಲೂಕು ಮಟ್ಟದಲ್ಲಿಯೂ ಕೂಡ ಹೃದ್ರೋಗಕ್ಕೆ ಚಿಕಿತ್ಸೆ,ಪಡೆಯಲು ಅನುಕೂಲವಾಗುವಂತೆ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ 75 ತಾಲ್ಲೂಕು ಆಸ್ಪತ್ರೆಗಳ ಮ್ಯಾಪಿಂಗಗೆ ಒಳಪಡಿಸಲಾಗುತ್ತಿದೆ.

Budget CS 2

ಸ್ನಾತಕೋತ್ತರ ವೈದ್ಯಕೀಯ ಕೋಸ್‌ರ್ಗಳನ್ನು ಜಿಲ್ಲಾ ಮಟ್ಟದಲ್ಲಿಯೂ ಪ್ರಾರಂಭಿಸಲು ಅನುಕೂಲವಾಗುವಂತೆ 200ಕ್ಕೂ ಅಧಿಕ ಹಾಸಿಗೆಗಳ ಸಾಮಥ್ಯವಿರುವ ಸರ್ಕಾರಿ ಆಸ್ಪತ್ರೆಗಳನ್ನು ಎನ್.ಎಂ.ಸಿ.ಯ ಅನುಮೋದನೆ ಪಡೆದು ಬೋಧನಾ ಆಸ್ಪತ್ರೆಗಳಾಗಿ ಪರಿವರ್ತಿಸಲಾಗುತ್ತದೆ. ಪ್ರಸಕ್ತ ಸಾಲಿನಿಂದ ತುಮಕೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಪ್ರಾರಂಭಿಸಲಾಗುತ್ತದೆ. “ಮುಖ್ಯಮಂತ್ರಿ ಆರೋಗ್ಯ ವಾಹಿನಿ” ಯೋಜನೆಯಡಿ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ಒದಗಿಸಲು ಬೀದರ್, ಚಾಮರಾಜನಗರ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಚಾರಿ ಕ್ಲಿನಿಕ್ ಪ್ರಾರಂಭ. ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ.

• ಬಡವರಿಗೆ ವೈದ್ಯಕೀಯ ಶಿಕ್ಷಣ ಅವಕಾಶ ಒದಗಿಸಲು ಕೈಗೊಳ್ಳುವ ಕ್ರಮಗಳು:

ವೈದ್ಯಕೀಯ ಶಿಕ್ಷಣ ಸೇರಬಯಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಠಿಯಿಂದ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ ನೀಡುವದಲ್ಲದೇ, ಸರ್ಕಾರಿ ಕೋಟಾದಡಿ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಬ್ಯಾಂಕುಗಳಿಂದ ಶೈಕಣಿಕ ಸಾಲ ಒದಗಿಸಲು ನೆರವು ಕಲ್ಪಿಸಿಕೊಡಲಾಗುತ್ತದೆ. ಪೌಷ್ಟಿಕ ಕರ್ನಾಟಕ ಯೋಜನೆಯಡಿ 93 ಕೋಟಿ ರೂ. ವೆಚ್ಚದಲ್ಲಿ ಪ್ರಾಯೋಗಿಕವಾಗಿ ರಾಜ್ಯದ 14 ಜಿಲ್ಲೆಗಳಲ್ಲಿ ಸಾರವರ್ಧಿತ ಅಕ್ಕಿ ವಿತರಣೆಗೆ ಕ್ರಮ. ಬಾಲ್ಯವಿವಾಹ ಹಾಗೂ ಹೆಣ್ಣುಮಕ್ಕಳು ಶಾಲೆಬಿಡುವುದನ್ನು ತಪ್ಪಿಸಿ, ಅಪೌಷ್ಟಿಕತೆ ನಿವಾರಿಸುವ “ಸ್ಪೂರ್ತಿ” ಯೋಜನೆ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುತ್ತದೆ.

ಹುಬ್ಬಳ್ಳಿ ಮತ್ತು ದಾವಣಗೇರೆಯಲ್ಲಿ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳನ್ನು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೇಗೇರಿಸಲಾಗುತ್ತದೆ. ಅಲ್ಲದೇ 19 ಹೊಸ ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗುತ್ತದೆ. ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ದಿಗೆ 100 ಅತ್ಯಾಧುನಿಕ ಸಂಚಾರಿ ಕ್ಲಿನಿಕ್ ಪ್ರಾರಂಭಿಸಲಾಗುತ್ತಿದೆ.

Popular Doctors

Related Articles