ಖಾನಾಪೂರ ಹತ್ತಿರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನ ತಲೆಗೆ ಗಂಭೀರ ಪೆಟ್ಟು ಬಿದ್ದ ಕಾರಣ ಮೆದಳು ನಿಷ್ಕ್ರೀಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ 26 ವರ್ಷದ ಯುವಕ ತನ್ನ ಅಂಗಾಂಗಗಳನ್ನು ದಾನ ಮಾಡಿ 4 ಜನರ ಜೀವ ಉಳಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಹೃದಯವನ್ನು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗೆ ಕಸಿ ಮಾಡಲು ಅಣಿಯಾದರೆ, ಲೀವರ (ಜಠರ) ಅನ್ನು ಬೆಂಗಳೂರಿನ ಬಿಜಿಎಸ್ ಗ್ಲೋಬ್, ಎರಡೂ ಕಿಡ್ನಿಗಳನ್ನು ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ಜೀರೋ ಟ್ರಾಫಿಕ್ ಮೂಲಕ ಕಳುಹಿಸಿಕೊಡಲಾಯಿತು. ಪೊಲೀಸರು ಸಂಪೂರ್ಣವಾಗಿ ಜೀರೋ ಟ್ರಾಫಿಕ್ ಅಥವಾ ಗ್ರೀನ ಕಾರಿಡಾರ (ಹಸಿರು ಪಥ) ಮೂಲಕ ಅಂಗಾಂಗಗಳನ್ನು ಸ್ಥಳಾಂತರಿಸಲು ಅವಕಾಶ ಕಲ್ಪಿಸಿಕೊಟ್ಟರು.
ಖಾನಾಪೂರ ತಾಲೂಕಿನ ಜಾಂಬೋಟಿ ಹತ್ತಿರದ ಅಮಟೆ ಗ್ರಾಮದ ನಿವಾಸಿ ಕೃಷಿ ಕುಟುಂಬದಿಂದ ಬಂದಂತಹ ಸಹದೇವ ಅರ್ಜುನ ಗಾಂವಕರ(26) ಅವರು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಮೆದುಳಿಗೆ ತೀವ್ರತರವಾದ ಗಾಯವಾದ್ದರಿಂದ ಚಿಕಿತ್ಸೆಗೆ ಸ್ಪಂಧಿಸದೇ ನಿಷ್ಕ್ರೀಯಗೊಂಡು ತನ್ನ ಕರ‍್ಯವನ್ನು ನಿಲ್ಲಿಸಿದ್ದರು. ಆದರೆ ಉಳಿದ ಅಂಗಾಂಗಗಳು ಕರ‍್ಯನಿರ್ವಹಿಸುತ್ತಿದ್ದವು.
ಮೆದುಳು ನಿಷ್ಕ್ರಿಯಗೊಂಡ ಯುವಕನ ತಂದೆ ತಾಯಿಗೆ ಹಾಗೂ ಕುಟುಂಬ ಸದಸ್ಯರಿಗೆ ಆಪ್ತಸಮಾಲೋಚನೆ ಮಾಡಿ, ನಿಮ್ಮ ಮಗ ನೀಡುವ ಅಂಗಾಂಗಗಳಿಂದ ಇನ್ನೊಬ್ಬರ ಜೀವ ಉಳಿಯುತ್ತದೆ ಎಂದು ಹೇಳಿದಾಗ, ಸ್ವಇಚ್ಚೆಯಿಂದ ಅಂಗಾಂಗಗಳನ್ನು ದಾನ ಮಾಡಲು ಒಪ್ಪಿದರು.
ಮೆದುಳು ನಿಷ್ಕ್ರೀಯಗೊಂಡ ವ್ಯಕ್ತಿಯ ಹೃದಯವನ್ನು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿಗೆ ಕಸಿ ಮಾಡುವಲ್ಲಿ ಇಲ್ಲಿನ ವೈದ್ಯರು ನಿರತರಾದರೆ, ಲೀವರ ಅನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದವರಗೆ ರಸ್ತೆ ಮೂಲಕ ಸಾಗಿ, ಅಲ್ಲಿಂದ ಬೆಂಗಳೂರಿಗೆ, ಎರಡೂ ಕಿಡ್ನಿಗಳನ್ನು ಧಾರವಾಡದ ಎಸಡಿಎಂ ಆಸ್ಪತ್ರೆಗೆ ರವಾನಿಸಲಾಯಿತು. ಯುವಕ ಮೃತಪಟ್ಟರೂ ಕೂಡ 4 ಜನರ ಜೀವ ಉಳಿಸಿ ಸಾರ್ಥಕತೆ ಮೆರೆದರು. ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ ಇಲಾಖೆಯ ಕರ‍್ಯ ಅತ್ಯಂತ ಶ್ಲಾಘನೀಯವಾದ್ದು. ಅತ್ಯಂತ ಜನಸಂದಣಿ ಹಾಗೂ ಸಂಚಾರ ದಟ್ಟಣೆಯಿಂದ ಕೂಡಿದ ರಸ್ತೆಯಲ್ಲಿ ಗ್ರೀನ್ ಕಾರಿಡಾರ ನಿರ್ಮಿಸಿ ಅಂಗಾಂಗಗಳನ್ನು ಶೀಘ್ರ ಸ್ಥಳಾಂತರಿಸಲು ಅವಕಾಶ ಕಲ್ಪಿಸಿಕೊಟ್ಟರು. ಮೃತರು ತಂದೆ, ತಾಯಿ, ಸಹೋದರ ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಇದಕ್ಕೂ ಮೊದಲು ನಗರದ ವಿಜಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿಯೇ ಮೆದುಳು ಗಂಭೀರ ಸ್ಥಿತಿಗೆ ತಲುಪಿದಾಗ ವಿಜಯಾ ಆಸ್ಪತ್ರೆಯ ಡಾ. ರವಿ ಪಾಟೀಲ ಅವರ ತಂಡ, ಅಮಟೆ ಗ್ರಾಮದ ಹಿರಿಯ ಅರ್ಜುನ ಕಸಲೇಕರ, ಅಭಿಮನ್ಯು ಡಾಗಾ, ವಿಜಯ ಈ ಕಾರ್ಯದಲ್ಲಿ ಸಹಕಾರ ನೀಡಿದರು. ಈ ಸಂದರ್ಭದಲ್ಲಿ ಡಾ. ಬಸವರಾಜ ಬಿಜ್ಜರಗಿ ಉಪಸ್ಥಿತರಿದ್ದರು. ಅಂಗಾಂಗಗಳನ್ನು ದಾನ ಮಾಡಿದ ವ್ಯಕ್ತಿ ಹಾಗೂ ಆತನ ಕುಟುಂಬ ಸದಸ್ಯರ ಕರ‍್ಯವನ್ನು ಸಂಸ್ಥೆಯ ಕರ‍್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಎಂ ವಿ ಜಾಲಿ ಅವರು ಅಭಿನಂದಿಸಿದ್ದಾರೆ.