ಬೆಳಗಾವಿ :ನಗರದ ಅರಿಹಂತ್ ಆಸ್ಪತ್ರೆಯು ಪ್ರತಿಷ್ಠಿತ ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್ಎಬಿಎಚ್)ಯಿಂದ ಸಂಪೂರ್ಣ ಗುಣಮಟ್ಟದ ಮಾನ್ಯತೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.
ಎನ್ಎಬಿಎಚ್ ಭಾರತದಲ್ಲಿನ ಆರೋಗ್ಯ ಸೌಲಭ್ಯಗಳ ಗುಣಮಟ್ಟಕ್ಕೆ ಮಾನ್ಯತೆ ನೀಡುವ ಅಥವಾ ನಿರ್ಧರಿಸುವ ಸಂಸ್ಥೆಯಾಗಿದ್ದು, ಒಂದು ವರ್ಷದೊಳಗೆ ಆಸ್ಪತ್ರೆಯು ಪ್ರತಿಷ್ಠಿತ ಎನ್ಎಬಿಎಚ್ ಸಂಸ್ಥೆಯಿಂದ ಮಾನ್ಯತೆ ಪಡೆದಿದ್ದು, ಆರೋಗ್ಯ ಕ್ಷೇತ್ರದಲ್ಲಿ ಬೆಳಗಾವಿಯ ಇತಿಹಾಸದಲ್ಲಿ ಇದೇ ಮೊದಲು ಇಂಥ ಮಾನ್ಯತೆ ಪಡೆದ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಉತ್ತರ ಕರ್ನಾಟಕದಲ್ಲಿ ಮಾನ್ಯತೆ ಪಡೆದ ಮೊದಲ ಆಸ್ಪತ್ರೆಯಾಗಿದೆ. ಮಾನ್ಯತೆ ಪ್ರಕ್ರಿಯೆಯು ರೋಗಿಯ ಸುರಕ್ಷತೆ, ಸೋಂಕು ನಿಯಂತ್ರಣ, ಮೂಲಸೌಕರ್ಯ ಮತ್ತು ಆರೋಗ್ಯ ಸೇವೆಗಳ ಸಾಮರ್ಥ್ಯ ಸೇರಿದಂತೆ ವಿವಿಧ ಅಂಶಗಳನ್ನು ಪರಿಶೀಲಿಸುವ ಸಮಗ್ರ ಮೌಲ್ಯಮಾಪನ ಪ್ರಕ್ರಿಯೆಯನ್ನು ಒಳಗೊಂಡಿದೆ.
ಎನ್ಎಬಿಎಚ್ ಸಂಸ್ಥೆಯ ತಂಡವು ಅರಿಹಂತ ಆಸ್ಪತ್ರೆಯ ಎಲ್ಲಾ ವಿಭಾಗಗಳನ್ನು ಪರಿಶೀಲಿಸಿದ ನಂತರ ನಡೆಸಿದ ಸಮಗ್ರ ಮೌಲ್ಯಮಾಪನವನ್ನು ಶ್ಲಾಘಿಸಿ ಸಂಪೂರ್ಣ ಎನ್ಎಬಿಎಚ್ ಮಾನ್ಯತೆ ನೀಡಿದೆ.
ನಮ್ಮ ಆಸ್ಪತ್ರೆ ಪೂರ್ಣ ಎನ್ಎಬಿಎಚ್ ಮಾನ್ಯತೆಯನ್ನು ಪಡೆದಿರುವುದಕ್ಕೆ ನಾವು ಸಂತೋಷಪಡುತ್ತೇವೆ. ಈಗ ನಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ ಮತ್ತು ಸಾಮಾನ್ಯ ಜನರಿಗೆ ಉತ್ತಮ ಗುಣಮಟ್ಟದ ರೋಗಿಗಳ ಆರೈಕೆಯನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ ಎಂದು ಆಸ್ಪತ್ರೆ ವೈದ್ಯಕೀಯ ನಿರ್ದೇಶಕರಾದ ಡಾ. ಎಂ. ಡಿ. ದೀಕ್ಷಿತ್ ಅವರು ಹೇಳಿದ್ದಾರೆ.
ಎನ್ಎಬಿಎಚ್ ಎಂದರೇನು?
ಎನ್ಎಬಿಎಚ್ ಎಂದರೆ ನ್ಯಾಷನಲ್ ಅಕ್ರೆಡಿಟೇಶನ್ ಬೋರ್ಡ್ ಫೋರ್ ಹಾಸ್ಪಿಟಲ್ಸ್ ಮತ್ತು ಹೆಲ್ತ್ಕೇರ್ ಪ್ರೊವೈಡರ್ಸ್. 2005ರಲ್ಲಿ ಸ್ಥಾಪಿತವಾದ ಈ ಸಂಸ್ಥೆಯು ಆಸ್ಪತ್ರೆಗಳು ಮತ್ತು ಆರೋಗ್ಯ ರಕ್ಷಣೆ ಒದಗಿಸುವವರಿಗೆ ರಾಷ್ಟ್ರೀಯ ಮಾನ್ಯತೆ ನೀಡುವ ಮಂಡಳಿ. ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಸಂಸ್ಥೆ ಅಥವಾ ಆಸ್ಪತ್ರೆ, ಅವುಗಳನ್ನು ಸ್ಥಾಪಿಸಲು ಮತ್ತು ನಿರ್ವಹಿಸುವ ಆಡಳಿತ ಮಂಡಳಿಯಾಗಿದೆ. ಎನ್ಎಬಿಎಚ್ ಭಾರತದ ಸಂವಿಧಾನದ ಪ್ರಕಾರ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದ ಅಡಿಯಲ್ಲಿ ಸಂವಿಧಾನಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಎನ್ಎಬಿಎಚ್ ದೇಶದ ಉನ್ನತ ಮಟ್ಟದಲ್ಲಿ ಆರೋಗ್ಯ ಮತ್ತು ಆರೋಗ್ಯ ಸೇವೆಗಳ ಮೇಲ್ವಿಚಾರಣೆ ಮಾಡುವ ಸಂಸ್ಥೆಯಾಗಿದೆ.