ನಾಲ್ಕು ಜನರ ಜೀವ ಉಳಿಸಿ ಇಬ್ಬರು ಅಂಧರಿಗೆ ಬೆಳಕಾದ ಯುವಕ

belagavi

ಧಾರವಾಡದ ಎಸ್‌ಡಿಎಂ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದಲ್ಲಿ ಮೆದಳು ನಿಷ್ಕ್ರೀಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ 27 ವರ್ಷದ ಯುವಕ ತನ್ನ ಅಂಗಾAಗಳನ್ನು ದಾನ ಮಾಡಿ 4 ಜನರ ಜೀವ ಉಳಿಸಿ, ಇಬ್ಬರು ಅಂದರಿಗೆ ಬೆಳಕಾಗಿ ಸಮಾಜಕ್ಕೆ ಮಾದರಿಯಾಗಿದ್ದಾರೆ.


ಹೃದಯ ಹಾಗೂ ಕಿಡ್ನಿಯನ್ನು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ಕಸಿ ಮಾಡಲು ಗ್ರೀನ ಕಾರಿಡಾರ ಮೂಲಕ ಧಾರವಾಡದಿಂದ ರಸ್ತೆ ಮೂಲಕ ತೆಗೆದುಕೊಂಡು ಬರಲಾಯಿತು. ಒಂದು ಕಿಡ್ನಿಯನ್ನು ಎಸಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗೆ ಕಸಿ ಮಾಡಿದರೆ, ಲೀವರ ಅನ್ನು ಬೆಂಗಳೂರಿನ ಆಸ್ಪತ್ರೆಗೆ ಏರ ಮೂಲಕ ಕಳುಹಿಸಿಕೊಟ್ಟರು. ಪೊಲೀಸರು ಸಂಪೂರ್ಣವಾಗಿ ಜೀರೋ ಟ್ರಾಫಿಕ್ ಅಥವಾ ಗ್ರೀನ ಕಾರಿಡಾರ (ಹಸಿರು ಪಥ) ಮೂಲಕ ಅಂಗಾAಗಗಳನ್ನು ಸ್ಥಳಾಂತರಿಸಲು ಅವಕಾಶ ಕಲ್ಪಿಸಿಕೊಟ್ಟರು.


ಮೆದಳು ನಿಷ್ಕ್ರಿಯಗೊಂಡಿದ್ದರೂ ಕೂಡ ಅಂಗಾAಗಳು ಕರ‍್ಯನಿರ್ವಹಿಸುತ್ತಿದ್ದವು. ಮೆದುಳು ನಿಷ್ಕ್ರಿಯಗೊಂಡ ಯುವಕನ ಪತ್ನಿ, ತಂದೆ, ತಾಯಿ, ಕುಟುಂಬ ಸದಸ್ಯರಿಗೆ ಆಪ್ತಸಮಾಲೋಚನೆ ಮಾಡಿ, ನೀವು ದಾನ ಮಾಡುವ ಅಂಗಾAಗಗಳು ನಾಲ್ಕು ಜನರ ಜೀವ ಉಳಿಸುವಲ್ಲಿ ಸಹಕಾರಿಯಾಗಲಿವೆ ಎಂದು ಹೇಳಿದಾಗ, ಸ್ವಇಚ್ಚೆಯಿಂದ ಅಂಗಾAಗಗಳನ್ನು ದಾನ ಮಾಡಲು ಒಪ್ಪಿದರು.
ಮೆದುಳು ನಿಷ್ಕ್ರೀಯಗೊಂಡ ಯುವಕನ ಹೃದಯವನ್ನು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗೋಕಾಕ ತಾಲೂಕಿನ 50 ವರ್ಷದ ವ್ಯಕ್ತಿಗೆ ಡಾ.ರಿಚರ್ಡ ಸಾಲ್ಡಾನಾ, ಡಾ. ಮೋಹನ ಗಾನ, ಡಾ. ಆನಂದ ವಾಘರಾಳಿ ಮತ್ತು ಅವರ ತಂಡ ಹಾಗೂ ಡಾ. ಎಸ್ ಐ ನೀಲಿ, ಡಾ. ಮಲ್ಲಿಕಾರ್ಜುನ ಕರಿಶೆಟ್ಟಿ(ಖಾನಪೇಟ) ಅವರ ತಂಡವು ಕಿಡ್ನಿ ಕಸಿ ಮಾಡುವಲ್ಲಿ ನಿರತರಾದರು. ಮೃತಪಟ್ಟರೂ ಕೂಡ 4 ಜನರ ಜೀವ ಉಳಿಸಿ, ಇಬ್ಬರ ಬಾಳಿಗೆ ಬೆಳಕಾಗಿ ಸಾರ್ಥಕತೆ ಮೆರೆದ ಯುವಕ. ಬೆಳಗಾವಿ ಹಾಗೂ ಹುಬ್ಬಳ್ಳಿ ಪೊಲೀಸ ಇಲಾಖೆಯ ಕರ‍್ಯ ಅತ್ಯಂತ ಶ್ಲಾಘನೀಯವಾದ್ದು. ಅತ್ಯಂತ ಜನಸಂದಣಿ ಹಾಗೂ ಸಂಚಾರ ದಟ್ಟಣೆಯಿಂದ ಕೂಡಿದ ರಾಷ್ಟಿçÃಯ ಹೆದ್ದಾರಿಯಲ್ಲಿ ಗ್ರೀನ್ ಕಾರಿಡಾರ ನಿರ್ಮಿಸಿ ಅಂಗಾAಗಳನ್ನು ಶೀಘ್ರ ಸ್ಥಳಾಂತರಿಸಲು ಅವಕಾಶ ಕಲ್ಪಿಸಿಕೊಟ್ಟರು.
ಅಂಗಾAಗಳನ್ನು ದಾನ ಮಾಡಿದ ಯುವಕ ಹಾಗೂ ಆತನ ಕುಟುಂಬ ಸದಸ್ಯರು, ಪೋಲಿಸರ ಕರ‍್ಯವನ್ನು ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಎಂ ವಿ ಜಾಲಿ ಅವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here